
ನವದೆಹಲಿ: ಉಕ್ರೇನ್ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ಸಂಜೆಯೂ ಉನ್ನತ ಮಟ್ಟದ ಸಭೆ ನಡೆಯಿತು. ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ 3ನೇ ಸರಣಿ ಸಭೆ ಇದಾಗಿದೆ. ಕೇಂದ್ರ ಸಚಿವರಾದ ಡಾ.ಎಸ್.ಜೈಶಂಕರ್ ಮತ್ತು ಪಿಯೂಷ್ ಗೋಯಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಮತ್ತು ಎನ್ ಎಸ್ ಎ ಮುಖ್ಯಸ್ಥ ಅಜಿತ್ ಧೋವಲ್ ಸಭೆಯಲ್ಲಿ ಭಾಗವಹಿಸಿದ್ದರು.
ಸೋಮವಾರ, ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಆಪರೇಷನ್ ಗಂಗಾ ಅಡಿಯಲ್ಲಿ ನಡೆಯುತ್ತಿರುವ ಪ್ರಯತ್ನಗಳ ನ್ನು ಪರಿಶೀಲಿಸಲು ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಕ್ರೇನ್ ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿ ಕರೆತರಲು ಮತ್ತು ಸುರಕ್ಷಿತವಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಇಡೀ ಸರ್ಕಾರಿ ಯಂತ್ರ ಹಗಲಿರುಳು ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.
