
ನವದೆಹಲಿ: ಉಕ್ರೇನ್ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ , ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಗುರುವಾರ ದೂರವಾಣಿಯಲ್ಲಿ ಮಾತನಾಡಿದ್ದಾರೆ. ದೂರವಾಣಿ ಸಂಭಾಷಣೆ ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಸಂಬಂಧಿಸಿದ್ದಾಗಿತ್ತು ಎಂದು ಪ್ರಧಾನಿ ಕಚೇರಿ ಪ್ರಕಟಣೆ ತಿಳಿಸಿದೆ.
ವಿಶೇಷವಾಗಿ ಖಾರ್ಕಿವ್ ನಲ್ಲಿ ಅನೇಕ ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಸಂರ್ಷದ ಪ್ರದೇಶಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಉಭಯ ನಾಯಕರು ಚರ್ಚಿಸಿದರು ಎಂದು ಪಿಎಂಓ ಹೇಳಿಕೆಯಲ್ಲಿ ತಿಳಿಸಿದೆ.
ರಷ್ಯಾ-ಉಕ್ರೇನ್ ಸಂಘರ್ಷ ಆರಂಭವಾದ ನಂತರ ಇದು ಪ್ರಧಾನಿ ಮೋದಿ ಮತ್ತು ಪುಟಿನ್ ನಡುವಿನ ಎರಡನೇ ದೂರವಾಣಿ ಸಂಭಾಷಣೆಯಾಗಿದೆ. ಕಳೆದ ಫೆ.25ರಂದು ರಷ್ಯಾ ಅಧ್ಯಕ್ಷರೊಂದಿಗೆ ಪ್ರಧಾನಿ ದೂರವಾಣಿ ಮೂಲಕ ಮಾತನಾಡಿ, ಹಿಂಸಾಚಾರವನ್ನು ತಕ್ಷಣ ನಿಲ್ಲಿಸುವಂತೆ ಕರೆ ನೀಡಿದ್ದರು.
