Breaking NewsLatestರಾಷ್ಟ್ರೀಯಸುದ್ದಿ
ರಾಜಸ್ಥಾನದ ಬಿಕ್ಕಟ್ಟಿನ ಬೆನ್ನಲ್ಲೇ ಗೆಲುವಿನ ಮಂತ್ರ ಜಪಿಸಿದ ಸಚಿನ್ ಪೈಲಟ್!

ನವದೆಹಲಿ: ರಾಜಸ್ಥಾನದಲ್ಲಿ ಚುನಾವಣೆಯನ್ನು ಗೆಲ್ಲುವುದೊಂದೇ ನಮ್ಮ ಪ್ರಮುಖ ಆದ್ಯತೆ ಆಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಕಮಿಟಿ(ಎಐಸಿಸಿ) ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ ಬೆನ್ನಲ್ಲೇ ಸಚಿನ್ ಪೈಲಟ್, ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದರು.
ಸೋನಿಯಾ ಗಾಂಧಿ ಭೇಟಿ ನಂತರ ಮಾತನಾಡಿದ ಸಚಿನ್ ಪೈಲಟ್, “ರಾಜಸ್ಥಾನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಒಂದರ ಹಿಂದೆ ಒಂದರಂತೆ ಅಧಿಕಾರದ ಗದ್ದುಗೆ ಏರುತ್ತವೆ. ಕಾಂಗ್ರೆಸ್ ಎರಡನೇ ಬಾರಿ ಏಕೆ ಅಧಿಕಾರಕ್ಕೆ ಏರಲಿಲ್ಲ ಎಂಬುದಕ್ಕೆ ನಮ್ಮ ಬಳಿ ಉತ್ತರವಿಲ್ಲ. ಆದರೆ ಗೆಲುವಿಗಾಗಿ ಒಟ್ಟಾಗಿ ಶ್ರಮಿಸುವುದಕ್ಕೆ ನಾವು ಆದ್ಯತೆ ನೀಡುತ್ತೇವೆ,” ಎಂದು ಸಚಿನ್ ಪೈಲಟ್ ಹೇಳಿದರು.
