Breaking NewsLatestಮನರಂಜನೆಸಿನಿಮಾಸ್ಯಾಂಡಲ್ ವುಡ್
ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

ಸ್ಯಾಂಡಲ್ವುಡ್ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ(54) ಇಂದು ನಿಧನರಾಗಿದ್ದಾರೆ
ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದಿದ್ದಾರೆ.
ಮೋಹನ್ ಜುನೇಜ ಅವರು ಕನ್ನಡದ ಹಲವಾರು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಹಾಸ್ಯನಟ ಹಾಗೂ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಜೊತೆಗೆ ಯಶ್ ನಟನೆಯ ಕೆಜಿಎಫ್ ಸಿನಿಮಾದಲ್ಲೂ ಮೋಹನ್ ಜುನೇಜ ನಟಿಸಿದ್ದರು.
