ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಅನುಮತಿ ಇಲ್ಲ

ಬೆಳಗಾವಿ : ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ -19 ಡೆಲ್ಟಾ ಪ್ಲಸ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಂಹಿತೆ 1973 ಕಲಂ 144 ರಡಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಹಾಗೂ ಜೋಗುಳಭಾವಿ ಸತ್ತೆಮ್ಮ ದೇವಿಯ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಹಾಗೂ ಸದರಿ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶದಲ್ಲಿನ ಅಂಗಡಿ ಮುಗ್ಗಟ್ಟುಗಳನ್ನು ತೆರೆಯುವುದನ್ನು ಮುಂದಿನ ಆದೇಶದವರೆಗೆ ನಿಷೇಧಿಸಿದ್ದಾರೆ.
ಸದರಿ ದೇವಸ್ಥಾನಗಳ ಆಡಳಿತ ಮಂಡಳಿಯವರು ಈ ದೇವಸ್ಥಾನಗಳಲ್ಲಿ ನಡೆಯುವ ದಿನನಿತ್ಯದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ಎಲ್ಲಾ ಮುಂಜಾಗೃತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಿದೆ .
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಹಾಗೂ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಎಂ ಜಿ ಹಿರೇಮಠ ತಿಳಿಸಿದ್ದಾರೆ
