Breaking NewsLatestಜಿಲ್ಲಾ ಸುದ್ದಿಮೆಟ್ರೋಮೈಸೂರುರಾಜ್ಯಸಾಹಿತ್ಯ / ಸಂಸ್ಕೃತಿಸುದ್ದಿ

ಮೈಸೂರು ಮಹಾರಾಜ ಕಾಲೇಜಿನಲ್ಲಿ ಪ್ರಕಾಶಕರ ದ್ವಿತೀಯ ಸಮ್ಮೇಳನ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರ ಬರುವ ಮಾ.15ರಂದು ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಕನ್ನಡ ಪುಸ್ತಕ ಪ್ರಕಾಶಕರ ದ್ವಿತೀಯ ಸಮ್ಮೇಳನವನ್ನು ಆಯೋಜಿಸಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕನ್ನಡ ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ 50 ವರ್ಷಗಳ ಸೇವೆ ಸಲ್ಲಿಸಿರುವ ಪ್ರಕಾಶನ ಸಂಸ್ಥೆಗಳಿಗೆ ಹಾಗೂ ಗಡಿ ಭಾಗದಲ್ಲಿ ಕನ್ನಡ ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರಕಾಶನ ಸಂಸ್ಥೆಗಳನ್ನು  ಸನ್ಮಾನಿಸಲು ನಿರ್ಧರಿಸಿದೆ.

ಇಂತಹ ಸಂಸ್ಥೆಗಳು ತಮ್ಮ ದೂರವಾಣಿ ಸಂಖ್ಯೆ ಮತ್ತು ಮಿಂಚಂಚೆ ಸಹಿತ ಪ್ರಾಧಿಕಾರಕ್ಕೆ ವಿವರಗಳನ್ನು ಕಳುಹಿಸಿಕೊಡಲು ವಿನಂತಿಸಲಾಗಿದೆ.

ಮಾ.3.2022ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಇವರಿಗೆ ತಲುಪುವಂತೆ ಅಂಚೆ ಮೂಲಕ ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ಮಿಂಚಂಚೆಗೆ ವಿವರಗಳನ್ನು ಕಳುಹಿಸಿಕೊಡಲು ಕೋರಲಾಗಿದೆ.

ಪ್ರಾಧಿಕಾರದ ವೆಬ್ ಸೈಟ್ನಲ್ಲೂ ಈ ಕುರಿತ ವಿವರಗಳನ್ನು ಪ್ರಕಟಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button