Breaking NewsLatestರಾಷ್ಟ್ರೀಯಸುದ್ದಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಏಳು ಮಂದಿ ಸಜೀವ ದಹನ: ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಶಿವರಾಜ್ ಸಿಂಗ್

ಇಂದೋರ್: ಎರಡು ಮಹಡಿಯ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಏಳು ಮಂದಿ ಸಜೀವ ದಹನಗೊಂಡಿರುವ ಘಟನೆ ಮಧ್ಯ ಪ್ರದೇಶ ರಾಜಧಾನಿ ಇಂದೋರ್ ನ ಸ್ವರ್ಣ ಭಾಗ್ ಕಾಲೊನಿಯಲ್ಲಿ ಶನಿವಾರ ನಸುಕಿನ ಜಾವ ನಡೆದಿದೆ.

ಮನೆಯೊಂದರ ಒಳಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಹತ್ತಿ ಉರಿದಿರಬಹುದು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ ಎಂದು ಇಂದೋರ್ ಪೊಲೀಸ್ ಆಯುಕ್ತ ಹರಿನಾರಾಯಣ ಚಾರಿ ಮಿಶ್ರ ತಿಳಿಸಿದ್ದಾರೆ. ಏಳು ಮಂದಿ ಸಜೀವ ದಹನಗೊಂಡರೆ ಅಗ್ನಿಶಾಮಕ ಸಿಬ್ಬಂದಿ 9 ಮಂದಿಯನ್ನು ಇದುವರೆಗೆ ರಕ್ಷಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು.

ಬೆಂಕಿಯನ್ನು ನಂದಿಸಿ ಸಹಜ ಸ್ಥಿತಿಗೆ ತರಲು ಮೂರು ಗಂಟೆ ಹಿಡಿಯಿತು ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ. ಹೆಚ್ಚಿನ ತನಿಖೆ ಮುಂದುವರಿದಿದೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದೋರ್ ಅಗ್ನಿ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button