Breaking NewsLatestಮೆಟ್ರೋರಾಜ್ಯಸುದ್ದಿ
ಶಾರ್ಟ್ ಸರ್ಕ್ಯೂಟ್: ಹೊತ್ತಿ ಉರಿಯಿತು ಬಿಎಂಟಿಸಿ ಬಸ್!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಇದೀಗ ನಗರದ ಮತ್ತೊಂದು ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬಸ್ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಬಸ್ ಮುಂಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಬನಶಂಕರಿ ಡಿಪೋದ ಬಸ್ ಎಂದು ತಿಳಿದುಬಂದಿದೆ. KA- -57F- 1447 ನಂಬರಿನ ಬಿಎಂಟಿಸಿ ಬಸ್ ಮೆಜೆಸ್ಟಿಕ್ನಿಂದ ಹೊಸಕೆರೆ ಹಳ್ಳಿ ವಿದ್ಯಾನಗರದ ಕಡೆ ಹೊರಟ್ಟಿತ್ತು. ಈ ವೇಳೆ ಬಸ್ನ ಬ್ಯಾನೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ, ನಿರ್ವಾಹಕ ಮತ್ತು ಪ್ರಯಾಣಿಕರು ಬಸ್ನಿಂದ ಕೆಳಗೆ ಇಳಿದಿದ್ದು, ಸದ್ಯ ಯಾರಿಗೂ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
