
ಬೆಂಗಳೂರು : ಬಿಜೆಪಿಯವರೇ ಹಿಜಾಬ್ ವಿವಾದ ಉಂಟು ಮಾಡಿಸುತ್ತಿದ್ದಾರೆ. ಸಮವಸ್ತ್ರ ಕಡ್ಡಾಯ ಎಂದು ಎಲ್ಲೂ ಹೇಳಿಲ್ಲ. ನಿನ್ನೆ ಪ್ರಿನ್ಸಿಪಾಲ್ ವಿದ್ಯಾರ್ಥಿನಿಯರನ್ನ ತಡೆದಿದ್ದು ಸಂವಿಧಾನ ವಿರೋಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಶಾಲು ಧರಿಸಿದವರ ವಿರುದ್ಧ ಕ್ರಮ ಜರುಗಿಸಿಲ್ಲ ಬಿಜೆಪಿಯವರು ಹಿಜಾಬ್ ವಿವಾದ ಮಾಡಿಸುತ್ತಿದ್ದಾರೆ. ಬಿಜೆಪಿಯವರು ಬೇಕಂತಲೇ ಕೇಸರಿ ಶಾಲು ಹಾಕಿಸಿದ್ದಾರೆ. ವಿಷಯಾಂತರ ಮಾಡಲು ಹೊರಟಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವಿವಾದಕ್ಕೆ ಸಂಬಂಧಪಟ್ಟಂತೆ ಕುಂದಾಪುರದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರು ಗೇಟ್ ಬಂದ್ ಮಾಡಿದ್ದು, ಸಂವಿಧಾನ ವಿರೋಧ. ಮಕ್ಕಳ ವಿದ್ಯಾಭ್ಯಾಸವನ್ನು ತಡೆಗಟ್ಟುವ ಪ್ರಯತ್ನ ನಡೆಯುತ್ತಿದೆ. ಸಂಘಪರಿವಾರದ ಪ್ರಯೋಗಾಲಯವೇ ಕರಾವಳಿ. ಸರ್ಕಾರ ಇದಕ್ಕೆಲ್ಲ ಕುಮ್ಮಕ್ಕು ನೀಡಬಾರದು. ಶಿಕ್ಷಣದಲ್ಲಿ ರಾಜಕೀಯ ಬೆರಸಬಾರದು ಎಂದು ಆರೋಪ ಮಾಡಿದ್ದಾರೆ.
