Breaking NewsLatestಬೆಳಗಾವಿರಾಜಕೀಯರಾಜ್ಯ
ಪೊಲೀಸರ ಬಗ್ಗೆ ಭಯವಿಲ್ಲ, ಕಾನೂನು ಸುವ್ಯವಸ್ಥೆ ಸರಿಯಿಲ್ಲ: ಸಿದ್ದರಾಮಯ್ಯ

ಬೆಳಗಾವಿ: ಆನೆಗೋಳದ ಕನಕದಾಸ ಕಾಲೋನಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ, ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಕುರಿತು ಮಾಹಿತಿ ಪಡೆದರು. ಜತೆಗೆ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವುದನ್ನು ತೀವ್ರವಾಗಿ ಖಂಡಿಸಿದರು. ಎಂ ಇ ಎಸ್ ಪುಂಡರಿಗೆ ನೆಲದ ಕಾನೂನಿನ ಮೇಲೆ ಗೌರವ ಇಲ್ಲ. ಪ್ರಕರಣಕ್ಕೆ ಸಂಬಂಧ ಸರ್ಕಾರದ ವೈಫಲ್ಯವಿದೆ. ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ ಎಂದು ಆರೋಪಿಸಿದರು.
ಎಂಇಎಸ್ ಸಂಘಟನೆಯನ್ನು ತಕ್ಷಣ ನಿಷೇಧಿಸಬೇಕು ಎಂಬುದು ಜನರ ಒತ್ತಾಯವಾಗಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ. ರಾಜ್ಯದಲ್ಲಿ ಗುಪ್ತಚರ ಇಲಾಖೆ ಅನ್ನೋದು ಸತ್ತು ಹೋಗಿದೆ ಎಂದು ದೂರಿದರು.
ಆಡಳಿತದ ಮೇಲೆ ಈ ಸರ್ಕಾರಕ್ಕೆ ಹಿಡಿತ ಇಲ್ಲ ಎಂದೂ ಸಿದ್ದರಾಮಯ್ಯ ಹೇಳಿದರು.
