Breaking NewsLatest
ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಅಧೀರನ ಸರ್ ಪ್ರೈಸ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷೆಯ ಸಿನಿಮಾ ಕೆಜಿಎಫ್ -2 ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟೀಸರ್ ಮತ್ತು ಪೋಸ್ಟರ್ ಗಳಿಂದಲೇ ಸಾಕಷ್ಟು ಸದ್ದು ಮಾಡಿದೆ. ಈ ಚಿತ್ರದಲ್ಲಿ ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಹೀಗಾಗಿ ಈ ಚಿತ್ರದ ಮೇಲೆ ಸಾಕಷ್ಟು ಕುತೂಹಲ ಹೆಚ್ಚಿದೆ.
ಇನ್ನು ಈ ಚಿತ್ರದಲ್ಲಿ ಸಂಜಯ್ ದತ್ ಅಧೀರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದೇ ತಿಂಗಳು ಏಪ್ರಿಲ್ 14 ರಂದು 6 ಸಾವಿರ ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ.
ಅಂದಾಗೆ ಕೆಜಿಎಫ್ -2 ನಿರ್ದೇಶಕ ಪ್ರಶಾಂತ್ ನೀಲ್ ಯುಗಾದಿ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ಸರ್ ಪ್ರೈಸ್ ಕೊಟ್ಟಿದ್ದಾರೆ. ಅಧೀರನ ಹೊಸ ಪೋಸ್ಟರ್ ರಿಲೀಸ್ ಮಾಡಿದ ಅವರು ಸಿನಿಮಾದ ಮತ್ತೊಂದು ಝಲಕ್ ಅನ್ನು ಜನರಿಗೆ ತೋರಿಸಿದ್ದಾರೆ.
