Breaking NewsLatestಜಿಲ್ಲಾ ಸುದ್ದಿರಾಜ್ಯಸುದ್ದಿ

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ಗೆ ಜೀವ ಬೆದರಿಕೆ..!

ಚಿಕ್ಕೋಡಿ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕಟ್ಟಾ ಹಿಂದುತ್ವವಾದಿಗೆ ಜೀವ ಬೆದರಿಕೆ ಹಾಕಲಾಗಿದೆ.

‘ನಿನ್ನನ್ನು ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ’ ಎಂದು ಅಪರಿಚಿತ ದುಷ್ಕರ್ಮಿಗಳು ಮುತಾಲಿಕ್ ಅವರಿಗೆ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ.

ಅಶ್ಲೀಲ ಶಬ್ದಗಳಿಂದ ನಿಂದಿಸಿ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ.

ತಮಗೆ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಮುತಾಲಿಕ್ ದೂರು ದಾಖಲಿಸಿದ್ದಾರೆ. ಶ್ರೀರಾಮಸೇನೆಯ ಸಂಸ್ಥಾಪಕ‌ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಕರೆ ಮಾಡಿದ ದುಷ್ಕರ್ಮಿಗಳು ಮಂಗಳೂರು ಭಾಗದ ಉರ್ದು ಮಿಶ್ರಿತ ಕನ್ನಡದಲ್ಲಿ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ಇಂತಹ ಬೆದರಿಕೆ ಕರೆಗಳಿಗೆಲ್ಲ ನಾನು ಹೆದರುವುದಿಲ್ಲವೆಂದು ಪ್ರಮೋದ್ ಮುತಾಲಿಕ್ ಜೀವ ಬೆದರಿಕೆ ಕರೆ ಮಾಡಿದ ದುಷ್ಕರ್ಮಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ನನಗೆ ಬೆದರಿಕೆ ಹಾಕುವ ಬದಲು ನೀವು ನ್ಯಾಯಯುತವಾಗಿ ಜೀವನ ಸಾಗಿಸಿ ಎಂದು ಮಾಧ್ಯಮಗಳ ಮೂಲಕ ಮುತಾಲಿಕ್ ಕರೆ ಮಾಡಿದವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button