Breaking NewsLatestಮೆಟ್ರೋರಾಜ್ಯಸುದ್ದಿ

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಎಲ್ಲರ ಜೀವನದಲ್ಲೂ ಅತಿ ಮುಖ್ಯ ಪರೀಕ್ಷೆ. ಎಕ್ಸಾಂ ಬರೆಯುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಉತ್ತೀರ್ಣರಾಗಬೇಕು. ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕೂಡ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ. ರಾಜ್ಯದ ಶೇ.99.9ರಷ್ಟು ಶಾಲೆಗಳಲ್ಲಿ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿಗಳು ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು ಎಂದರು.

Related Articles

Leave a Reply

Your email address will not be published. Required fields are marked *

Back to top button