Breaking NewsLatestಮೆಟ್ರೋರಾಜ್ಯಸುದ್ದಿ

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ; ಬಿಗಿ ಭದ್ರತೆ

ಬೆಂಗಳೂರು: ಇಂದಿನಿಂದ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಬರೆಯಲಿರುವ 8,73,846 ವಿದ್ಯಾರ್ಥಿಗಳ ಪೈಕಿ 4,52,732 ಬಾಲಕರು ಮತ್ತು 4,21,110 ಮಂದಿ ಬಾಲಕಿಯರು. ಪರೀಕ್ಷೆಗೆ 15,387 ಶಾಲೆಗಳು ನೋಂದಾಯಿಸಿಕೊಂಡಿದ್ದು, 3,444 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 144ನೇ ಸೆಕ್ಷನ್ ಅನ್ವಯ ನಿರ್ಬಂಧ ಆದೇಶ ಜಾರಿ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ಸಂಚರಿಸಬಹುದು. ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ.

Related Articles

Leave a Reply

Your email address will not be published. Required fields are marked *

Back to top button