Breaking NewsLatestರಾಷ್ಟ್ರೀಯ

ಸಾಮಾಜಿಕ ಹೋರಾಟಗಾರ ಸ್ಟ್ಯಾನ್ ಸ್ವಾಮಿ ನಿಧನ

ಮುಂಬೈ: ಹಿರಿಯ ಸಾಮಾಜಿಕ ಹೋರಾಟಗಾರ, ಬುಡಕಟ್ಟು ಸಮುದಾಯಗಳ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಸ್ಟ್ಯಾನ್ ಸ್ವಾಮಿ ಇಂದು‌ ಮಧ್ಯಾಹ್ನ ನಿದನರಾಗಿದ್ದಾರೆ.

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಎನ್​ಐಎಯಿಂದ ಬಂಧಿತರಾಗಿದ್ದ ಸ್ಟ್ಯಾನ್ ಸ್ವಾಮಿ ಅವರಿಗೆ 84 ವರ್ಷ ವಯಸ್ಸಾಗಿತ್ತು. ಸ್ವಾಮಿ ಪರ ವಾದಿಸುತ್ತಿದ್ದ ನ್ಯಾಯವಾದಿ ಮಿನಿ ದೇಸಾಯಿ ಅವರು ಸ್ಟ್ಯಾನ್ ಸ್ವಾಮಿ ನಿಧನದ ಬಗ್ಗೆ ಮುಂಬೈ ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮಿ ಅವರಿಗೆ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಳೆದ ಮೇ 30ರಿಂದ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ಅವರ ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ವೆಂಟಿಲೇಟರ್​ನಲ್ಲಿ ಇಡಲಾಗಿತ್ತು.

Spread the love

Related Articles

Leave a Reply

Your email address will not be published. Required fields are marked *

Back to top button