ನಂಜನಗೂಡು ದೇಗುಲ ತೆರವು ಪ್ರಕರಣ: ತಹಶೀಲ್ದಾರ್ ಮೋಹನ ಕುಮಾರಿ ಎತ್ತಂಗಡಿ

ಮೈಸೂರು: ನಂಜನಗೂಡಿನ ಹುಚ್ಚಗಣಿ ದೇವಾಲಯ ತೆರವುಗೊಳಿಸಿದ್ದಕ್ಕೆ, ತಹಶೀಲ್ದಾರ್ ಮೋಹನ ಕುಮಾರಿ ಅವರನ್ನು ವರ್ಗಾಯಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ನಂಜನಗೂಡಿನ ಹುಚ್ಚಗಣಿ ಮಹದೇವಮ್ಮ ದೇಗುಲ ತೆರವುಗೊಳಿಸಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಹೇಳಿತ್ತು. ಈ ಸಂಬಂಧ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ದೇಗುಲ ತೆರವು ಸರಿಯಲ್ಲ ಎಂದು ಟೀಕಿಸಿದ್ದರು. ಇದರಿಂದ ಎಚ್ಚೆತ್ತ ಸರ್ಕಾರ ಮೈಸೂರು ಜಿಲ್ಲಾಡಳಿತ ಹಾಗೂ ತಹಸಿಲ್ದಾರ್‌ಗೆ ನೋಟಿಸ್ ನೀಡಿತ್ತು.
ಸ್ಥಳೀಯರು ಕಾಂಗ್ರೆಸ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದರು. ಬಿಜೆಪಿ ಸರ್ಕಾರದ ಈ ನಡೆಗೆ ಈಗ ಎಲ್ಲೆಡೆ ಬಾರೀ ಆಕ್ರೋಶ ವ್ಯಕ್ತವಾಗಿದೆ.
ಹಿಂದೂ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಿಂದ ತಹಶಿಲ್ದಾರ್ ಎತ್ತಂಗಡಿ ಮಾಡಿದೆ. ಹಿಂದೂ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲೇ ದೇವಾಲಯ ಹೊಡೆದಿದ್ದು ಅಧಿಕಾರಿಯನ್ನ ವರ್ಗಾವಣೆ ಮಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ.
