Breaking NewsLatestಕಲಬುರ್ಗಿಕ್ರೈಂಜಿಲ್ಲಾ ಸುದ್ದಿರಾಜ್ಯಸುದ್ದಿ

ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧಕ್ಕೆ ಆಗ್ರಹ: ಉಗ್ರ ಹೋರಾಟದ ಎಚ್ಚರಿಕೆ

ಕಲಬುರಗಿ: ‘ವ್ಯಾಪಾರ ಧರ್ಮ ಯುದ್ಧ’ ಈಗ ಜಿಲ್ಲೆಗೂ ಕಾಲಿಟ್ಟಿದೆ. ಹಿಂದು ದೇವಸ್ಥಾನದ ಆವರಣದಲ್ಲಿ  ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧ ಏರುವಂತೆ ಶ್ರೀರಾಮ ಸೇನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಖಾಂತರ ಸಿಎಂ ಬೊಮ್ಮಾಯಿ ಹಾಗೂ ಮುಜರಾಯಿ ಇಲಾಖೆ ಸಚಿವರಿಗೆ ಮನವಿ ಪತ್ರ ರವಾನಿಸಿದ ಕಾರ್ಯಕರ್ತರು 2002 ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶದ ಅನ್ವಯ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳ ಆವರಣದಲ್ಲಿ ಹಿಂದುಯೇತರರು ವ್ಯಾಪಾರ ವಹಿವಾಟು ಮಾಡುವಂತಿಲ್ಲ, ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧ ಹೇರಬೇಕು. ಈಗಾಗಲೇ ವ್ಯಾಪಾರ ವಹಿವಾಟು ಮಾಡುವವರನ್ನು ತೆರವುಗೊಳಿಸಬೇಕು ಅಂತ ಆಗ್ರಹಿಸಿದರು. ಸರ್ಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳದಿದ್ರೆ ಉಗ್ರ ಹೋರಾಟ ಮಾಡುವದಾಗಿ ಕಾರ್ಯಕರ್ತರು ಎಚ್ಚರಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button