ಯೋಗೇಶಗೌಡ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹಿನ್ನಡೆ

ಧಾರವಾಡ : ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಭಾರಿ ಹಿನ್ನಡೆಯಾಗಿದ್ದು, ಸುಪ್ರೀಂಕೋರ್ಟ್‌ಗೆ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಸಿಬಿಐ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಪ್ರೀಂಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್‌ನಿಂದ ರಿಟ್ ಅರ್ಜಿ ವಜಾಗೊಂಡಿದೆ. ಈ ಮೂಲಕ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.
ಪ್ರಕರಣದ ಸುದೀರ್ಘ ವಿಚಾರಣೆಗೆ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಈ ಮೊದಲು ಸೂಚನೆ ನೀಡಿತ್ತು. ಹೈಕೋರ್ಟ್ ಸಹ ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್‌ನ ಈ ತೀರ್ಪು ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದರು. ಆದರೆ ಈಗ ಹೈಕೋರ್ಟ್ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿಯ ಕುರಿತು ಅಂತಿಮ ನಿರ್ಧಾರವನ್ನು ಹೊರಹಾಕಿದ್ದು, ವಿನಯ್ ಕುಲಕರ್ಣಿಯ ಅರ್ಜಿಯನ್ನು ವಜಾ ಮಾಡುವ ಮೂಲಕ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡದಿದೆ.
ಈಗಾಗಲೇ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯಯ್ ಕುಲಕರ್ಣಿ ಸಿಬಿಐ ಅಧಿಕಾರಿಗಳಿಂದ ಬಂಧನವಾಗಿ, ಸುಮಾರು ಒಂಬತ್ತು ತಿಂಗಳು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆದಿದ್ದು, ಸದ್ಯ ಷರತ್ತು ಬದ್ಧ ಜಾಮೀನಿನ ಮೇಲೆ ವಿನಯ್ ಕುಲಕರ್ಣಿಯ ಕೆಲವು ತಿಂಗಳುಗಳ ಹಿಂದೆ ಹೊರ ಬಂದಿದ್ದಾರೆ. ಆದರೆ ಇವರಿಗೆ ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ಇದ್ದೀಗ ಸುಪ್ರೀಂ ಕೋರ್ಟ್ ವಿನಯ್ ಅವರ ಅರ್ಜಿಯನ್ನು ವಜಾ ಮಾಡಿದ್ದು, ಭಾರೀ ಹಿನ್ನಡೆಯಾಗಿದೆ.
