Breaking NewsLatestಕಲಬುರ್ಗಿಕ್ರೈಂಜಿಲ್ಲಾ ಸುದ್ದಿರಾಜ್ಯಸುದ್ದಿ
ಟ್ಯಾಂಕರ್-ಖಾಸಗಿ ಬಸ್ ಡಿಕ್ಕಿ: ಹಲವರ ಸ್ಥಿತಿ ಗಂಭೀರ

ಕಲಬುರಗಿ: ಲಿಕ್ವಿಡ್ ಸಿಮೆಂಟ್ ಟ್ಯಾಂಕರ್ ಮತ್ತು ಖಾಸಗಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡು ವಾಹನಗಳು ಪಲ್ಟಿಯಾದ ಘಟನೆ ಕಲಬುರಗಿ ಹೊರವಲಯದ ಹುಮನಬಾದ್ ವರ್ತುಲ ರಸ್ತೆಯಲ್ಲಿ ನಡೆದಿದೆ.
ಹುಮನಬಾದ್ ಕಡೆಯಿಂದ ಆರೆಂಜ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಹಾಗೂ ಖರ್ಗೆ ಸರ್ಕಲ್‌ನಿಂದ ಹುಮನಬಾದ್ ರಿಂಗ್ ರಸ್ತೆ ಕಡೆಗೆ ಟ್ಯಾಂಕರ್ ಬರುವಾಗ ಅವಘಡ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಎರಡು ವಾಹನಗಳು ತೆಲೆ ಕೆಳಗಾಗಿ ಪಲ್ಟಿಯಾಗಿವೆ. ಸ್ಥಳಕ್ಕೆ ದೌಡಾಯಿಸಿದ ಸಂಚಾರಿ ಪೊಲೀಸರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.
ಬಸ್‌ನಲ್ಲಿದ್ದ 24 ಪ್ರಯಾಣಿಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಎರಡು ವಾಹನಗಳನ್ನು ಬೃಹತ್ ಕ್ರೈನ್ ಮೂಲಕ ಮೇಲಕ್ಕೆತ್ತಲಾಗಿದೆ. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
