ಮಕ್ಕಳಿಲ್ಲ ಎಂದು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

ಕಲಬುರಗಿ: ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಶಿಕ್ಷಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾಂವ್ ಗ್ರಾಮದಲ್ಲಿ ನಡೆದಿದೆ.
ಭೂಮಿಕಾ ಊಡಗಿ(36) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಕಳೆದ ಐದು ವರ್ಷದ ಹಿಂದೆ ದಿಗ್ಗಾಂವ್ ಗ್ರಾಮದ ನಿವಾಸಿ ಶರಣಬಸಪ್ಪ ಎಂಬುವವರೊಂದಿಗೆ ವಿವಾಹವಾಗಿದ್ದ ಭೂಮಿಕಾ, ದಿಗ್ಗಾಂವ್ ಗ್ರಾಮದ ಸರ್ಕಾರಿ ಫ್ರೌಡ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆಸಲ್ಲಿಸುತ್ತಿದ್ದರು.
ಬೆಳಿಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದಾರೆ. ಭೂಮಿಕಾ ಶಾಲೆಗೂ ಹೋಗದೆ, ಮನೆಗೂ ಬಾರದಿದ್ದಾಗ ಆತಂಕಗೊಂಡ ಮನೆಯವರು ಹುಡುಕಲಾರಂಬಿಸಿದ್ದಾರೆ. ಈ ವೇಳೆ ಬಾವಿಯ ಬಳಿ ಭೂಮಿಕಾ ಚಪಲಿ ಸಿಕ್ಕಾಗ ಅನುಮಾನಗೊಂಡು ಬಾವಿಯಲ್ಲಿ ಹುಡುಕಿದಾಗ ಶವ ಪತ್ತೆಯಾಗಿದೆ.
ಮದುವೆಯಾಗಿ ಐದು ವರ್ಷ ಕಳೆದಿದ್ದರು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
