Breaking NewsLatestರಾಜ್ಯರಾಷ್ಟ್ರೀಯಸುದ್ದಿ
ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು; ಮಹಿಂದಾ ರಾಜಪಕ್ಸೆ ಸೇರಿದಂತೆ ಎಲ್ಲ ಸಚಿವರು ರಾಜೀನಾಮೆ

ಕೊಲಂಬೊ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿನ ರಾಜಕೀಯ ಬೆಳೆವಣಿಗೆ ಗರಿಗದರಿದೆ. ಭಾನುವಾರರಂದು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಸೇರಿದಂತೆ ಸಂಸತ್ತಿನ ಎಲ್ಲಾ ಸಚಿವರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
ದೇಶದ ಆರ್ಥಿಕ ಬಿಕ್ಕಟ್ಟಿನ ನಡುವೆ ಭಾನುವಾರ ಮಹಿಂದಾ ರಾಜಪಕ್ಸೆ ಅವರು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಿದ್ದಾರೆ. ಈ ಸಭೆಯಿಂದಾಗಿ ಮಹಿಂದಾ ರಾಜಪಕ್ಸೆ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಊಹಾಪೆಪೋಹಗಳು ಇದೀಗ ಹರಿದಾಡುತ್ತಿದೆ. ಅಲ್ಲದೇ ಈ ಸಭೆಯಲ್ಲಿ ಹಲವಾರು ಪ್ರಮುಖ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
