Breaking NewsLatestಜಿಲ್ಲಾ ಸುದ್ದಿಬೆಳಗಾವಿರಾಜ್ಯಸುದ್ದಿ

ಕಪ್ಪು ಚುಕ್ಕೆ ಇಲ್ಲದೆ ಇರುವ ನಾನೇ ಮುಂದಿನ ಸಿಎಂ: ಸಚಿವ ಉಮೇಶ್ ಕತ್ತಿ

ಬೆಳಗಾವಿ : ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಆಹಾರ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದು, ಸಿಎಂ ಹುದ್ದೆ ಖಾಲಿ ಇದ್ರೆ ಮುಂದೇ ನಾನೇ ಇದ್ದೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸ್ಥಾನದ ಆಸೆಯನ್ನು ತೇಲಿಬಿಟ್ಟಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ಖಾಲಿಯಾದರೆ ನಂತರ ನಾನೇ ಇದ್ದೇನೆ. ಮುಖ್ಯಮಂತ್ರಿಯಾಗಲು ನನಗೆ ಎಲ್ಲಾ ಅರ್ಹತೆಗಳಿವೆ. ನನ್ನ ಮೇಲೆ ಯಾವುದೇ ಕಳಂಕದ ಆರೋಪಗಳು ಇಲ್ಲ, 8 ಬಾರಿ ಶಾಸಕನಾಗಿ ಆಯ್ಕೆಯಾದವನು. ಪಕ್ಷ ಮನಸ್ಸು ಮಾಡಿದರೆ ಸಿಎಂ ಆಗಬೇಕೆಂಬ ಆಸೆಯಿದೆ ಎಂದರು.

ಮುಖ್ಯಮಂತ್ರಿ ಬದಲಾವಣೆ ಯಾರು ಮಾಡುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ಹೈಕಮಾಂಡ್ ಮನಸ್ಸು ಮಾಡಿದರೆ ಸಿಎಂ ಆಗುವ ಆಸೆಯಿದೆ ಎಂದು ಹೇಳಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button