Breaking NewsLatestಜಿಲ್ಲಾ ಸುದ್ದಿತುಮಕೂರು
ಹಣ ಪೀಕುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ತುಮಕೂರು: ಮೊನ್ನೆ ತಾನೆ ಐದು ಸಾವಿರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದ ಪ್ರಕರಣ ಮಾಸುವ ಮುಂಚೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಜಿಲ್ಲೆಯ ಬೆಳ್ಳಾವಿಯ ಚನ್ನೇನಹಳ್ಳಿ ಗ್ರಾಮ ಲೆಕ್ಕಾಧಿಕಾರಿ ನಟರಾಜ್ ಎಂಬುವವರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳ ದ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಪಹಣಿ ತಿದ್ದುಪಡಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿ ನಟರಾಜ್ 20 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟು ಮುಂಗಡವಾಗಿ 5000 ಪಡೆದು 15 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆ ವೇಳೆ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ ಇನ್ಸ್ಪೆಕ್ಟರ್ ವಿಜಯಲಕ್ಷ್ಮಿ, ನರಸಿಂಹರಾಜು ಚಂದ್ರು, ಶಿವಣ್ಣ ಇನ್ನಿತರರಿದ್ದರು.
