Breaking NewsLatestರಾಷ್ಟ್ರೀಯಸುದ್ದಿ

ಪ್ರಧಾನಿ ಮೋದಿ ಭಾಷಣದ ಬಳಿಕ 8 ರಾಜ್ಯಗಳಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ತೆರಿಗೆ ವಿನಾಯಿತಿ

ಜಮ್ಮು ಹಾಗೂ ಕಾಶ್ಮೀರದ ಕುರಿತಾಗಿ ಹಲವು ವರ್ಷಗಳಿಂದ ಮುಚ್ಚಿಡಲಾಗಿದ್ದ ವಿಷಯಗಳನ್ನು “ದಿ ಕಾಶ್ಮೀರ್ ಫೈಲ್ಸ್” ಚಿತ್ರವು ತೆರೆದಿಟ್ಟಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದು ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ.

ಬಿಜೆಪಿ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ “ದಿ ಕಾಶ್ಮೀರ್ ಫೈಲ್ಸ್” ಹಿಂದಿ ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಜೊತೆಗೆ ಎಲ್ಲ ಸಂಸದರು ಈ ಚಿತ್ರವನ್ನೊಮ್ಮೆ ನೋಡುವಂತೆ ಪ್ರಧಾನಿ ಕೇಳಿಕೊಂಡಿದ್ದು, ಇಂಥ ಚಿತ್ರಗಳು ಹೆಚ್ಚು ಹೆಚ್ಚಾಗಿ ನಿರ್ಮಿಸಬೇಕಿದೆ ಎಂದು ತಿಳಿಸಿದರು.

ಮೋದಿ ಚಿತ್ರ ನೋಡಿ ಮೆಚ್ಚುಗೆ ಸೂಚಿಸುತ್ತಿದ್ದಂತೆ ಇತ್ತ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರ ವೀಕ್ಷಿಸಿ ಕರ್ನಾಟಕದಲ್ಲಿ ಚಿತ್ರಕ್ಕೆ ತೆರಿಗೆ ಪಾವತಿಯನ್ನ ಕಡಿತಗೊಳಿಸಿದ್ರು. ಇತ್ತ ರಾಜಕೀಯ ನಾಯಕರುಗಳಿಗೆ ಉಚಿತ ಚಿತ್ರ ವೀಕ್ಷಣೆಗೂ ಅವಕಾಶ ನೀಡಲಾಗಿತ್ತು.

ಈ ಮಧ್ಯೆ ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಗುಜರಾತ್, ಹರ್ಯಾಣ, ಮಧ್ಯಪ್ರದೇಶ, ಗೋವಾ, ತ್ರಿಪುರಾ, ಉತ್ತರಾಖಂಡ್, ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲೂ ಸಿನಿಮಾ ಮೇಲಿನ ಮನರಂಜನಾ ತೆರಿಗೆಗೆ ವಿನಾಯಿತಿ ನೀಡಲಾಗಿದೆ.

ಕಾಶ್ಮೀರಿ ಪಂಡಿತರ ಮೇಲೆ ನಡೆಸಿದ ಕೌರ್ಯ ಹಾಗೂ ಪಂಡಿತರು ಅನುಭವಿಸಿದ ನರಕ ಯಾತನೆಯ ಕುರಿತು 32 ವರ್ಷಗಳ ಹಿಂದಿನ ನೈಜ ಘಟನೆಯನ್ನ ದಿ ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ತೋರಿಸಲಾಗಿದೆ. ಆರಂಭದಲ್ಲಿ ಚಿತ್ರಕ್ಕೆ ಸಾಕಷ್ಟು ವಿರೋಧ ಕೇಳಿ ಬಂದಿತ್ತು. ಆದರೆ ಚಿತ್ರತಂಡ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಿ ಸಿನಿಮಾಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದರು.’

ಮಾರ್ಚ್ 11ರಂದು ಬಿಡಗಡೆಯಾಗಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ ಹಾಗೂ ಪ್ರಕಾಶ್ ಬೆಳವಾಡಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button