Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಬಿಜೆಪಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ; ಡಾ.ಸುಧಾಕರ್

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ‘ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತಾಗಿದೆ.

ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ರಚನಾತ್ಮಕ ಹೋರಾಟ ಮಾಡಲು ಯಾವುದೇ ವಿಷಯಗಳಲ್ಲಿದೆ ಹತಾಶಗೊಂಡಿರುವ ಕಾಂಗ್ರೆಸ್ ನಾಯಕರು ದಿನಕ್ಕೊಂದು ಕಟ್ಟುಕಥೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದು ಬಿಜೆಪಿ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ದಿಟ್ಟ ನಾಯಕತ್ವ, ಅಭಿವೃದ್ಧಿ, ಸುಶಾಸನ, ಭ್ರಷ್ಟಾಚಾರ-ಮುಕ್ತ ಆಡಳಿತ ನೀಡುವ ಮೂಲಕ ದೇಶಾದ್ಯಂತ ಜನಮನ್ನಣೆ ಪಡೆಯುತ್ತಿರುವ ನಮ್ಮ ಪಕ್ಷಕ್ಕೆ ಚುನಾವಣೆ ಗೆಲ್ಲಲು ಯಾವುದೇ ವಾಮ ಮಾರ್ಗದ ಅವಶ್ಯಕತೆಯೂ ಇಲ್ಲ ಅದರ ಬಗ್ಗೆ ನಂಬಿಕೆಯೂ ಇಲ್ಲ. ‘ಕುಣಿಯಲಾರದವನಿಗೆ ನೆಲ ಡೊಂಕು’ ಎಂಬಂತೆ ಜನರ ವಿಶ್ವಾಸ ಕಳೆದುಕೊಂಡು ಹತಾಶಗೊಂಡಿರುವ ಕಾಂಗ್ರೆಸ್ ಪಕ್ಷ ಮತಯಂತ್ರಗಳ ಮೇಲೆ ಸಂಶಯ ಮೂಡಿಸುವುದು, ಚುನಾವಣಾ ಆಯೋಗದ ಬಗ್ಗೆ ಅಪಸ್ವರ ಎತ್ತುವುದು ಹೀಗೆ ಒಂದಲ್ಲಾ ಒಂದು ಕ್ಯಾತೆ ತೆಗೆಯುತ್ತಲೆ ಬಂದಿದ್ದು ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಈ ಸುಳ್ಳುಗಳ ಸರಮಾಲೆಗೆ ಹೊಸ ಸೇರ್ಪಡೆಯಷ್ಟೆ ಎಂದು ಕಿಡಿಕಾರಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button