Breaking NewsLatestಕ್ರೈಂಜಿಲ್ಲಾ ಸುದ್ದಿದಾವಣಗೆರೆ

ಮೂವರು ಖತರ್ನಾಕ್ ಅಂತರ್ ಜಿಲ್ಲಾ ಕಳ್ಳರ ಸೆರೆ

ದಾವಣಗೆರೆ: ಬೇರೆ ಬೇರೆ ಜಿಲ್ಲೆಗಳಲ್ಲಿ ವಾಹನ ಕಳ್ಳತನ ಮಾಡಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಮೂವರು ಅಂತರ್ ಜಿಲ್ಲಾ ಕಳ್ಳರನ್ನು ಸೆರೆ ಹಿಡಿಯುವಲ್ಲಿ ಮಲೇಬೆನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳಿಂದ 14 ದ್ವಿಚಕ್ರ ವಾಹನಗಳು, ಒಂದು ಓಮಿನಿ ವಶಪಡಿಸಿಕೊಳ್ಳುವ ಮೂಲಕ 18 ಪ್ರಕರಣಗಳನ್ನು ಭೇದಿಸಿದ್ದಾರೆ. ದಾವಣಗೆರೆ ಕೆಟಿಜೆ ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4, ಹೊನ್ನಾಳಿಯಲ್ಲಿ 2, ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ, ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ತಲಾ ಒಂದು ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳಲ್ಲಿ ಒಟ್ಟು 10.08 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಸಿಪಿಐ ಸತೀಶ್ ಕುಮಾರ್, ಪಿಎಸ್ ಐ ರವಿಕುಮಾರ್, ಶಂಕರಗೌಡ, ಶ್ರೀಪತಿ ಗಿನ್ನಿ ಹಾಗೂ ಸಿಬ್ಬಂದಿಯನ್ನು ದಾವಣಗೆರೆ ಎಸ್ಪಿ ಸಿ. ಬಿ. ರಿಷ್ಯಂತ್ ಅಭಿನಂದಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button