Breaking NewsLatestಕೋಲಾರಜಿಲ್ಲಾ ಸುದ್ದಿ

Serial Accident: ಕೋಲಾರದಲ್ಲಿ ಭೀಕರ ಸರಣಿ ಅಪಘಾತ: ಮೂವರ ಸಾವು

ಕೋಲಾರ: ಬಸ್, ಟಾಟಾ ಏಸ್ ಹಾಗೂ ದ್ವಿ ಚಕ್ರ ವಾಹನದ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಕೋಲಾರ-ಚಿಂತಾಮಣಿ ಮುಖ್ಯರಸ್ತೆಯ ಶೆಟ್ಟಿ ಮಾದಮಂಗಲ ಗ್ರಾಮದ ಬಳಿ ನಡೆದಿದೆ.

ಕೋಲಾರದಿಂದ ಚಿಂತಾಮಣಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಅತೀ ವೇಗವಾಗಿ ಚಲಿಸುತ್ತಿದ್ದು ಬಸ್ ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದ್ದು, ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಏಸ್ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗ, ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

ಅಪಘಾತ ಸಂಭವಿಸುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕೋಲಾರ ಮತ್ತು ಚಿಂತಾಮಣಿ ಆಸ್ಪತ್ರೆಗಳಿಗೆ ರವಾನಿಸಿದ್ದಾರೆ

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button