Breaking NewsLatestಉತ್ತರ ಕನ್ನಡಜಿಲ್ಲಾ ಸುದ್ದಿ

ಶಾಲಾ ಚಾವಣಿ ಕುಸಿತ: ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕಾರವಾರ: ಪಾಠ ಕೇಳುತ್ತಿದ್ದ ವೇಳೆ ಶಾಲಾ ಕಟ್ಟಡದ ಮೇಲ್ಛಾವಣಿ ಪದರ ಕುಸಿದು ಐದು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲ ನಗರದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ನಡೆದಿದೆ.

ಇಂದು (ಮಾ.9) ಅಂಕೋಲದ ನಿರ್ಮಲ ಕಾನ್ವೆಂಟ್ ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿಯ ಪದರ ಕುಸಿದಿದೆ. ತರಗತಿಯಲ್ಲಿ ಪಾಠ ಕೇಳುತಿದ್ದ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಅಂಕೋಲದ ತಹಶೀಲ್ದಾರ್ ಹಾಗೂ ಬಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button