Breaking NewsLatestಬಾಲಿವುಡ್ಮನರಂಜನೆಸಿನಿಮಾ

ಮತ್ತೊಂದು ಸಿನಿಮಾ ಘೋಷಿಸಿದ ದಿ ಕಾಶ್ಮೀರ್ ಫೈಲ್ಸ್ ಚಿತ್ರ ನಿರ್ಮಾಪಕ!

ದೇಶದಲ್ಲಿ ಭಾರಿ ಸಂಚಲನ ಮೂಡಿಸಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ 200 ಕೋಟಿ ಕಲೆಕ್ಷನ್ ಮಾಡಿ ಭಾಕ್ಸ್ ಆಫೀಸ್ ನಲ್ಲಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕೆ ಅಭಿಷೇಕ್ ಅಗರ್ ವಾಲ್ ಬಂಡವಾಳ ಹೂಡಿದ್ದರು. ಕಡಿಮೆ ಬಜೆಟ್ ನಲ್ಲಿ ನಿರ್ಮಾಣವಾದ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿತ್ತು. ಇದೀಗ ಅವರ ಕಡೆಯಿಂದ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಅವರು ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈ ಚಿತ್ರಕ್ಕೆ ಟೈಗರ್ ನಾಗೇಶ್ವರ ರಾವ್ ಎಂದು ಟೈಟಲ್ ಇಡಲಾಗಿದೆ.

ವಿಶೇಷ ಏನೆಂದರೆ ಈ ಬಾರಿ ಕೂಡ ಅಭಿಷೇಕ್ ಅಗರ್ವಾಲ್ ಅವರು ನೈಜ ಘಟನೆ ಆಧಾರಿತ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆ ಕಾರಣದಿಂದ ಮತ್ತೆ ಎಲ್ಲರಲ್ಲೂ ಕೂತುಹಲ ಮೂಡಲಿದೆ. ಬಹುಭಾಷೆಯಲ್ಲಿ ‘ಟೈಗರ್ ನಾಗೇಶ್ವರ ರಾವ್’ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಚಿತ್ರದಲ್ಲಿ ಟಾಲಿವುಡ್ನ ಖ್ಯಾತ ನಟ ಮಾಸ್ ಮಹಾರಾಜ ರವಿ ತೇಜ ಅವರು ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ವಂಶಿ ಅವರು ನಿರ್ದೇಶನ ಮಾಡಲಿದ್ದಾರೆ.

ಅಂದಾಗೆ ಸ್ಟೂವರ್ಟ್ಪುರಂನಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಟೈಗರ್ ನಾಗೇಶ್ವರ ರಾವ್ ನಿರ್ಮಾಣ ಆಗಲಿದೆ. ಇಂದು ಯುಗಾದಿ ಹಬ್ಬದ ಪ್ರಯುಕ್ತ ಪ್ರೀ-ಲುಕ್ ಪೋಸ್ಟರ್ ರಿಲೀಸ್ ಆಗಲಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡೋ ಸಾಧ್ಯತೆಯನ್ನ ತಳ್ಳಿಹಾಕುವಂತಿಲ್ಲ.

Spread the love

Related Articles

Leave a Reply

Your email address will not be published. Required fields are marked *

Back to top button