Breaking NewsLatestಮೆಟ್ರೋರಾಜ್ಯಸುದ್ದಿ
ನಾಡಿನೆಲ್ಲೆಡೆ ಇಂದು ರಾಮನವಮಿ ಹಬ್ಬದ ಸಂಭ್ರಮ

ಬೆಂಗಳೂರು: ಇಂದು ನಾಡಿನೆಲ್ಲೆಡೆ ರಾಮನವಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಸಿಲಿಕಾನ್ ಸಿಟಿಯ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಹಬ್ಬದ ವಾತಾವರಣ ಕಳೆಕಟ್ಟಿದೆ. ರಾತ್ರಿಯಿಂದಲೇ ಪೂಜೆ ಆರಂಭವಾಗಿದ್ದು, ಇಂದು ಬೆಳ್ಳಗ್ಗೆ ಆರು ಗಂಟೆಯಿಂದಲೇ ಮಾರುತಿಗೆ ವಿಶೇಷ ಪೂಜೆ ನಡೆಯುತ್ತಿದೆ. ಪೂಜೆಯ ನಂತರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. 9 ಗಂಟೆಗೆ ನಂತರ ಆಂಜನೇಯನಿಗೆ ವಿಶೇಷ ಅಭಿಷೇಕ ನಡೆಯುತ್ತದೆ. ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಪ್ರಸಾದ ವಿತರಣೆ ಮಾಡಲಾಗುತ್ತದೆ. 2 ಗಂಟೆಯ ನಂತರ ರಥೋತ್ಸವ ನಡೆಯಲಿದೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ದೇಗುಲದಲ್ಲಿ ಹೂವಿನ ಅಲಂಕಾರ ಜೋರಾಗಿದೆ.
