Breaking NewsLatestಮೆಟ್ರೋರಾಜ್ಯಸುದ್ದಿ

ನಾಳೆಯಿಂದ ಬೆಂಗಳೂರು ಕರಗ ಮಹೋತ್ಸವಕ್ಕೆ ಚಾಲನೆ

ಬೆಂಗಳೂರು: ಕಳೆದ ಎರಡು ವರ್ಷಗಳ ಕೊರೊನಾದಿಂದ ಧಾರ್ಮಿಕ ಆಚರಣೆ ಸರಳವಾಗಿ ನಡೆದಿತ್ತು. ಆದರೆ ಬೆಂಗಳೂರಿನಲ್ಲಿ ಪ್ರತಿವರ್ಷ ಆಚರಿಸುವ ಪ್ರಸಿದ್ಧ ಕರಗ ಮಹೋತ್ಸವ ಕೊರೊನಾದಿಂದ ರದ್ದಾಗಿತ್ತು. ಇದೀಗ ಕೊರೊನಾ ಕಡಿಮೆಯಾಗಿದ್ದರಿಂದ ಈ ಬಾರಿ ಕರಗ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ನಗರದಲ್ಲಿ ನಾಳೆಯಿಂದ ಈ ಮಹೋತ್ಸವಕ್ಕೆ ಚಾಲನೆ ಸಿಗಲಿದೆ.

ಸದ್ಯ ಕೋವಿಡ್​​ ಮೂರನೇ ಅಲೆಯಲ್ಲಿ ತೀವ್ರತೆ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಕರಗ ಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 9 ದಿನಗಳ ಕಾಲ ನಡೆಯೋ ಈ ಅದ್ಧೂರಿ ಉತ್ಸವದಲ್ಲಿ ನಿತ್ಯ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಏಪ್ರಿಲ್ 16ರ ಮಧ್ಯರಾತ್ರಿ ಕರಗ ಶಕ್ತ್ಯೋತ್ಸವ ಜರುಗಲಿದ್ದು, ರಾಜ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ಇರಲಿದೆ.

Related Articles

Leave a Reply

Your email address will not be published. Required fields are marked *

Back to top button