Breaking NewsLatestಜಿಲ್ಲಾ ಸುದ್ದಿಮೈಸೂರುರಾಷ್ಟ್ರೀಯಸುದ್ದಿ

ಚೆನ್ನೈ – ಮೈಸೂರು ನಡುವಿನ ‘ವಂದೇ ಭಾರತ್‌’ ರೈಲಿನ ಪ್ರಾಯೋಗಿಕ ಸಂಚಾರ ಆರಂಭ

ಚೆನ್ನೈ: ಚೆನ್ನೈ-ಬೆಂಗಳೂರು ಹಾಗೂ ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲು ಸೋಮವಾರ (ನ.7)ರ ಮುಂಜಾನೆ 5.50ರಲ್ಲಿ ಚೆನ್ನೈನ ಎಂ.ಜಿ ರಾಮಚಂದ್ರನ್‌ ಕೇಂದ್ರ ರೈಲು ನಿಲ್ದಾಣದಿಂದ ಪ್ರಯೋಗಿಕ ಸಂಚಾರ ಆರಂಭಿಸಿದೆ.

ಚೆನ್ನೈ-ಬೆಂಗಳೂರು-ಮೈಸೂರು ನಡುವಣ ವಂದೇ ಭಾರತ್ ಎಕ್ಸ್‌ಪ್ರೆಸ್ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಲಿದೆ. ಈ ಮಾರ್ಗದಲ್ಲಿ ಬಹುತೇಕ ನ. 10ರಂದು ರೈಲು ಅಧಿಕೃತವಾಗಿ ಸಂಚರಿಸಲಿದೆ ಎಂದು ತಿಳಿದು ಬಂದಿದೆ.

ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗಷ್ಟೇ ವಂದೇ ಭಾರತ್ ಎಕ್ಸ್‌ಪ್ರೆಸ್‌ಅನ್ನು ಭಾರತೀಯ ರೈಲ್ವೆ ಬಿಡುಗಡೆಗೊಳಿಸಿತ್ತು.

ಕರ್ನಾಟಕದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ವಂದೇ ಭಾರತ್ 2.0 ರೈಲುಗಳು, ‘ಕವಚ’ ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ (ಟಿಸಿಎಎಸ್) ಸೇರಿದಂತೆ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ರೈಲು ಕೇವಲ 52 ಸೆಕೆಂಡುಗಳಲ್ಲಿ ಗಂಟೆಗೆ 0ರಿಂದ 100 ಕಿ.ಮೀ. ವೇಗವನ್ನು ಪಡೆದುಕೊಳ್ಳಬಲ್ಲದು.

Spread the love

Related Articles

Leave a Reply

Your email address will not be published. Required fields are marked *

Back to top button