Breaking NewsLatestರಾಜಕೀಯರಾಜ್ಯಶಿಕ್ಷಣಸುದ್ದಿ

ಉಕ್ರೇನ್ ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲೇ ಶಿಕ್ಷಣ: ಡಾ.ಕೆ.ಸುಧಾಕರ್

ಬೆಂಗಳೂರು: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದಿಂದ ಸಾಕಷ್ಟು ಜೀವಗಳು ಪ್ರಾಣ ಕಳೆದುಕೊಂಡಿದ್ದು ಲಕ್ಷಾಂತರ ಕುಟುಂಬಗಳು ಬೀದಿಗೆ ಬಂದು ನಿಂತಿವೆ. ಇತ್ತ ವೈದ್ಯರಾಗಬೇಕು ಎಂದು ಕನಸು ಹೊತ್ತು ಉಕ್ರೇನ್ ತೆರಳಿದ್ದ ವಿದ್ಯಾರ್ಥಿಗಳು ಯುದ್ಧದಿಂದಾಗಿ ವಾಪಸ್ ತವರಿಗೆ ಮರಳಿದ್ದಾರೆ. ಆದ್ರೆ ಮುಂದಿನ ವಿದ್ಯಾಭ್ಯಾಸದ ಚಿಂತೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಸರ್ಕಾರ ತೆಗೆದುಕೊಂಡ ಮಹತ್ವದ ತೀರ್ಮಾನದಿಂದ ಕೊಂಚ ನಿರಾಳರಾಗಿದ್ದಾರೆ.

ವಿಧಾನಸೌಧದಲ್ಲಿ ವಿದ್ಯಾರ್ಥಿಗಳ ಜೊತೆ ಸಭೆ ನಡೆಸಿದ ಆರೋಗ್ಯ ಹಾಗೂ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ ಉಕ್ರೇನ್ ನಿಂದ ವಾಪಸ್ಸಾದವರ ಶಿಕ್ಷಣಕ್ಕೆ ಅವಕಾಶ ನೀಡಲಾಗುತ್ತಿದೆ. ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಉಕ್ರೇನ್ ಹಾಗೂ ರಷ್ಯಾ ನಡುವೆ ನಿರಂತರವಾಗಿ ಯುದ್ಧ ನಡೆಯುತ್ತಿದೆ. ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆ ತರಲಾಗಿದೆ. ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಬಗ್ಗೆ ಚರ್ಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ಅದರಂತೆ ಚರ್ಚೆ ನಡೆಸಿದ್ದು, ತಾತ್ಕಾಲಿಕವಾಗಿ ಒಂದು ಅಭಿಪ್ರಾಯಕ್ಕೆ ಬರಲಾಗಿದೆ ಎಂದರು.

ಯುದ್ಧ ಬೇಗ ಕೊನೆಯಾಗಲಿ ಎಂಬುದು ಎಲ್ಲರ ಆಶಯ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಮನಸ್ಥಿತಿ ಹೇಗಿರಲಿದೆ ಎಂಬುದನ್ನು ಗಮನಿಸಿ ಕಾನೂನಿನ ಚೌಕಟ್ಟಿನೊಳಗೆ ಕ್ರಮ ವಹಿಸಲಾಗುವುದು. ಅವರ ಉತ್ತಮ ಭವಿಷ್ಯಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಹಾಗೂ ವೈದ್ಯಕೀಯ ಸಚಿವರು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button