Breaking NewsLatestರಾಜಕೀಯರಾಷ್ಟ್ರೀಯಸುದ್ದಿ
ಯುಪಿ ಚುನಾವಣೆ: ಸೋಮವಾರ ಅಖಿಲೇಶ್ ಯಾದವ್ ನಾಮಪತ್ರ ಸಲ್ಲಿಕೆ

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮುಂಬರುವ ವಿಧಾನಸಭಾ ಚುನಾವಣೆಗೆ ಮೈನ್ಪುರಿ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಅಖಿಲೇಶ್ ಯಾದವ್ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ತಿಳಿಸಿದ್ದಾರೆ.
ಆದರೆ ಅಖಿಲೇಶ್ ಯಾದವ್ ವಿರುದ್ಧ ಬಿಜೆಪಿ ಕ್ಷೇತ್ರದಿಂದ ಇನ್ನು ಯಾವುದೇ ಅಭ್ಯರ್ಥಿಯನ್ನು ಆಖೈರು ಗೊಳಿಸಿಲ್ಲ 1993 ರಿಂದಲು ಇದು ಸಮಾಜವಾದಿ ಪಕ್ಷದ ಭದ್ರಕೋಟೆ ಎಂದೇ ಜನಜನಿತವಾಗಿದೆ.
ಉತ್ತರ ಪ್ರದೇಶದ ಜನರು ಈಗಾಗಲೇ ತಮ್ಮ ತೀರ್ಮಾನ ನೀಡಿದ್ದು ಅಖಿಲೇಶ್ ಯಾದವ್ ನೇತೃತ್ವದಲ್ಲಿ ಸಮಾಜವಾದಿ ಪಕ್ಷ ಹೊಸ ಸರ್ಕಾರ ರಚನೆ ಮಾಡಲಿದೆ ಎಂಬ ವಿಶ್ವಾಸವನ್ನು ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.
