Breaking NewsLatestರಾಜಕೀಯರಾಷ್ಟ್ರೀಯಸುದ್ದಿ
125 ಅಭ್ಯರ್ಥಿಗಳ ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ

ಲಖ್ನೋ: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಎಲ್ಲರಿಗಿಂತ ಮುಂಚಿತವಾಗಿ ಕಾಂಗ್ರೆಸ್ ಪಕ್ಷ 125 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 50 ಜನರಿಗೆ ಮಹಿಳೆಯರಿಗೆ ಟಿಕೆಟ್ ನೀಡಿರುವುದಾಗಿ ಹೇಳಿದರು.
ಒಟ್ಟಾರೆ ಶೇಕಡ ಪ್ರತಿಶತ 40 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.ಇದೊಂದು “ಮೊದಲ ಐತಿಹಾಸಿಕ ಕ್ರಮ” ಎಂದೂ ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ವಹಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರ ಹೇಳಿದ್ದಾರೆ.
