
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗ್ಲೆ ಸಿನಿಮಾ ನೋಡಿದ ಸಾಕಷ್ಟು ರಾಜಕೀಯ ನಾಯಕರು ಚಿತ್ರವನ್ನ ಮೆಚ್ಚಿಕೊಂಡಿದ್ದು ಸಾಕಷ್ಟು ಕಡೆಗಳಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಇದೀಗ ಈ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಕ್ರೋಶ ಹೊರಹಾಕಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಕೆಲವರು ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೋಟಿಗಟ್ಟಲೆ ಸಂಪಾದಿಸಿದ್ದಾರೆ ಮತ್ತು ನಿಮಗೆ ಕೇವಲ ಪೋಸ್ಟರ್‌ಗಳನ್ನು ಹಾಕುವ ಕೆಲಸವನ್ನು ನೀಡಲಾಗಿದೆ” ಎಂದರು.
ಬಿಜೆಪಿ ಶಾಸಕರು ವಿಧಾನಸಭೆ ಅಧಿವೇಶನಕ್ಕೆ ಅಡ್ಡಿಪಡಿಸಿ ಕಾಶ್ಮೀರ ಫೈಲ್ಸ್ ಚಿತ್ರವನ್ನ ತೆರಿಗೆ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೆ ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ಗಳನ್ನು ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸಬೇಕೆಂಬ ಬಿಜೆಪಿ ಬೇಡಿಕೆಯ ವಿರುದ್ಧ ವಾಗ್ದಾಳಿ ನಡೆಸಿದರು.
ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲು ಬಿಜೆಪಿಯು ವಿವೇಕ್ ಅಗ್ನಿಹೋತ್ರಿ ಅವರನ್ನು ಕೇಳಬೇಕು ಮತ್ತು ಪ್ರತಿಯೊಬ್ಬರೂ ಅದನ್ನು ಉಚಿತವಾಗಿ ನೋಡುತ್ತಾರೆ. ಕೆಲವರು ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೋಟಿಗಟ್ಟಲೆ ಸಂಪಾದಿಸಿದ್ದಾರೆ ಮತ್ತು ನಿಮಗೆ ಕೇವಲ ಪೋಸ್ಟರ್‌ಗಳನ್ನು ಹಾಕುವ ಕೆಲಸವನ್ನು ನೀಡಿದ್ದಾರೆ ಎಂದು ಕೇಜ್ರಿವಾಲ್ ವಾಗ್ದಾಳಿ ಮಾಡಿದ್ದಾರೆ.
