Breaking NewsLatestರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಯುಪಿಯಲ್ಲಿ ನಾಳೆ 6ನೇ ಹಂತದ ಮತದಾನ, ಸಿಎಂ ಯೋಗಿ ಭವಿಷ್ಯ ನಿರ್ಧರಿಸಲಿರುವ ಮತದಾರರು

ನವದೆಹಲಿ: ಉತ್ತರ ಪ್ರದೇಶದಲ್ಲಿ 6ನೇ ಹಂತದ ವಿಧಾನಸಭೆ ಚುನಾವಣೆಗೆ ಮತದಾನ ಗುರುವಾರ(ಮಾ.3) ನಡೆಯಲಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು ಮತದಾನಕ್ಕೆ ವೇದಿಕೆ ಸಜ್ಜುಗೊಂಡಿದೆ. 6ನೇ ಹಂತದಲ್ಲಿ 10 ಜಿಲ್ಲೆಗಳ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಕಣದಲ್ಲಿ 676 ಅಭ್ಯರ್ಥಿಗಳಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೇ ಮೊದಲ ಬಾರಿಗೆ ಗೋರಖ್ ಪುರ ವಿಧಾನಸಭೆ ಕ್ಷೇತ್ರದಿಂದ ಚುನಾವಣೆ ಎದುರಿಸುತ್ತಿದ್ದಾರೆ.

ಇ,320 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2.14 ಕೋಟಿ ಮತದಾರರು ಗುರುವಾರ ತಮ್ಮ ಹಕ್ಕು ಚಲಾಯಿಸಲಿದ್ದಾರೆ.  ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button