ಕೋವಿಡ್ ನಿಯಂತ್ರಣಕ್ಕೆ ಲಸಿಕೆ ರಾಮಬಾಣ: ಪ್ರಧಾನಿ

ನವದೆಹಲಿ: ದೇಶದಲ್ಲಿ ಕೋವಿಡ್ ನಿವಾರಿಸಲು ಲಸಿಕೆ ರಾಮಬಾಣವಾಗಿದೆ. ಹೀಗಾಗಿ ಪ್ರತಿಯೊಬ್ಬರು ಲಸಿಕೆ ಹಾಕಿಸಿ ಕೊಳ್ಳಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ರಾಜ್ಯಗಳ ಮುಖ್ಯಮಂತ್ರಿಗಳಿಗೆ ಗುರುವಾರ ಕೋವಿಡ್ ಪರಿಸ್ಥಿತಿ ಕುರಿತಂತೆ ವರ್ಚುವಲ್ ವೇದಿಕೆ ಮೂಲಕ ಸಂವಾದ ನಡೆಸಿ ಅವರು ಮಾತನಾಡಿದರು. ಜಿಲ್ಲಾಮಟ್ಟದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಿ ಸೋಂಕು ತಡೆಯಲು ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆಯೂ ರಾಜ್ಯಗಳಿಗೆ ಸಲಹೆ ಮಾಡಿದ್ದಾರೆ. ಲಸಿಕೆ ಕುರಿತ ವದಂತಿಗಳಿಗೆ ಕಿವಿಗೊಡದಂತೆ ಜನತೆಗೆ ಪ್ರಧಾನಿ ಮನವಿ ಮಾಡಿದ್ದಾರೆ.
ಲಸಿಕೆ ಜೊತೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಮೂಲಕ ದೇಶದಲ್ಲಿ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದಾಗಿದೆ ಎಂದರು. ಈಗಾಗಲೇ ಜನವರಿ 3ರಿಂದ ಆರೋಗ್ಯ ಕಾರ್ಯಕರ್ತರು ಮುಂಚೂಣಿ ಕಾರ್ಯಕರ್ತರು ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಹಾಜರಿದ್ದರು .
