Breaking NewsLatestಜಿಲ್ಲಾ ಸುದ್ದಿಮಂಡ್ಯಸುದ್ದಿ
ವೈರಮುಡಿ ಉತ್ಸವ: ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಚಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಆಚರಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಮಾರ್ಚ್ 9 ರಿಂದ 21 ರ ವರೆಗೆ ನಡೆಯಲಿರುವ ಚಲುವ ನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಆಚರಣೆ ಪೂರ್ವ ಸಿದ್ಧತೆ ಮತ್ತು ಮುಂಜಾಗ್ರತ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿದರು.
ಸಭೆಯಲ್ಲಿ ಶಾಸಕ ಪುಟ್ಟರಾಜು, ಮಂಡ್ಯ ಜಿಲ್ಲಾಧಿಕಾರಿ ಅಶ್ವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
