Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜ್ಯಸುದ್ದಿ

ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯ, ಸರ್ಕಾರ ಸುತ್ತೋಲೆ ಹಿಂಪಡೆದಿದೆ; ಅರಗ ಜ್ಞಾನೇಂದ್ರ

ಬೆಂಗಳೂರು: ದೇವಸ್ಥಾನಗಳಲ್ಲಿ ಪೂಜಾ ವಿಧಿಗಳಲ್ಲಿ ಒಂದಾದ ಜಾಗಟೆ, ಗಂಟೆ, ಶಂಖ ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂಬ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆ ಹಿಂಪಡೆದಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ವಿಧಾನಸಭೆಗೆ ತಿಳಿಸಿದರು.

ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಮತ್ತು ರವಿಸುಬ್ರಹ್ಮಣ್ಯ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ  ಗೃಹ ಸಚಿವರು,  ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದರು.

ಯಾವ ಧಾರ್ಮಿಕ ಕೇಂದ್ರಗಳಲ್ಲಿ ಮುಂಜಾನೆ ಈ ರೀತಿಯ ಶಬ್ದ ಉಂಟಾಗುತ್ತಿತ್ತೋ ಅಂತಹ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ನೋಟಿಸ್ ನೀಡಲಾಗಿದೆ. ಇದು ಯಾವುದೇ ಒಂದು ಧರ್ಮ ಅಥವಾ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ನೋಟಿಸ್ ನೀಡಿರಲಿಲ್ಲ. ಇದರಿಂದ ಕೆಲವು ಗೊಂದಲ ಉಂಟಾಗಿದ್ದರಿಂದ ಈಗ ಆದೇಶವನ್ನು ಹಿಂಪಡೆಯಲಾಗಿದೆ ಎಂದರು.

ಇದಕ್ಕೂ ಮುನ್ನ ಸಿ.ಟಿ.ರವಿ ಮಾತನಾಡಿ, ಸಾವಿರಾರು ವರ್ಷಗಳಿಂದ ದೇವಸ್ಥಾನ ಮತ್ತು ಮನೆಗಳಲ್ಲಿ ಪೂಜೆ, ಪುನಸ್ಕಾರ ಮಾಡುವಾಗ ಶಂಖ ಊದುವುದು, ಗಂಟೆ ಬಾರಿಸುವುದು, ಜಾಗಟೆ ಬಾರಿಸುವುದು ನಡೆದುಕೊಂಡು ಬಂದಿರುವ ಸಂಪ್ರದಾಯ. ಸಾವಿರಾರು ವರ್ಷಗಳಿಂದಲೂ ಈ ಬಗ್ಗೆ ಯಾರೂ ಕೂಡ ತಕರಾರು ತೆಗೆದಿರಲಿಲ್ಲ. ಈಗ ಏಕಾಏಕಿ ಆಕ್ಷೇಪ ಇದೆ. ಇದರ ಹಿಂದೆ ಯಾವುದಾದರೂ ಪಿತೂರಿ ಇದೆಯೇ ಎಂದು ಪ್ರಶ್ನಿಸಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button