Breaking NewsLatestಬೆಂಗಳೂರುರಾಜ್ಯಸುದ್ದಿ

ಸಂಪುಟ ವಿಸ್ತರಣೆ; ಇಂದು ಅಥವಾ ನಾಳೆ ಸಂಜೆ ಸಿಎಂ ದೆಹಲಿಗೆ ದೌಡು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಶೀಘ್ರದಲ್ಲಿಯೇ ಮುಹೂರ್ತ ನಿಗದಿಯಾಗಲಿದೆ. ಇಂದು ಅಥವಾ ನಾಳೆ ಸಿಎಂ ಬಸಾರಾಜ್ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಅಥವಾ ನಾಳೆ ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ಭಾನುವಾರ ಹೈಕಮಾಂಡ್ ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ.

ಸಿಎಂ ಬೊಮ್ಮಾಯಿ ದೆಹಲಿ ಪ್ರಯಾಣಕ್ಕೆ ಸಜ್ಜಾಗಿರುವ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಲಾಭಿ ಆರಂಭಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಸಂದರ್ಭದಲ್ಲಿ ಸಿಎಂ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಯಾವೆಲ್ಲ ನಾಯಕರಿಗೆ ಮಣೆಹಾಕಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

Spread the love

Related Articles

Leave a Reply

Your email address will not be published. Required fields are marked *

Back to top button