Breaking NewsLatestಬಾಲಿವುಡ್ಮನರಂಜನೆರಾಷ್ಟ್ರೀಯಸುದ್ದಿ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಿ ಆದರೆ ಮುಸ್ಲಿಮರನ್ನು ದ್ವೇಷಿಸಬೇಡಿ: ಮಹೆಬೂಬ್ ಮುಫ್ತಿ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಯಾರು ನಿರೀಕ್ಷಿಸಿರದ ಮಟ್ಟಿಗೆ ಸದ್ದು ಮಾಡ್ತಿದೆ. ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಚಿತ್ರ ನೋಡೋಕೆ ಜನ ಮುಗಿ ಬೀಳ್ತಿದ್ದಾರೆ. ಇದೀಗ  ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನ ಮುಂದಿಟ್ಟುಕೊಂಡು ಧರ್ಮದ ಹೆಸರಿನಲ್ಲಿ ಜನರನ್ನು ಪ್ರಚೋದಿಸಲು ಬಿಜೆಪಿ ಮುಂದಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ನಾನು ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ನೋಡಿಲ್ಲ. ಚಿತ್ರದಲ್ಲಿ ಹಿಂಸಾಚಾರ, ರಕ್ತಪಾತಗಳು ಹೆಚ್ಚಾಗಿದ್ದು, ನೋವಿನ ದೃಶ್ಯಗಳಿವೆ ಎಂದು ಕೇಳಿದ್ದೇನೆ. ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯ ಭಯಾನಕವಾಗಿದ್ದು, ಅವರ ನೋವನ್ನು ನಾವು ಅನುಭವಿಸುತ್ತೇವೆ. ಆದರೆ ನೀವು ಕಾಶ್ಮೀರಿ ಮುಸ್ಲಿಮರನ್ನು ದ್ವೇಷಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ʼದಿ ಕಾಶ್ಮೀರ್‌ ಫೈಲ್ಸ್‌ʼ ವೀಕ್ಷಿಸಿ, ಆದರೆ ಮುಸ್ಲಿಮರನ್ನು ದ್ವೇಷಿಸಬೇಡಿ. ಕಣಿವೆಯಿಂದ ಕಾಶ್ಮೀರಿ ಪಂಡಿತರು ವಲಸೆ ಹೋದ ಬಗ್ಗೆ ಕೇಂದ್ರ ಸರ್ಕಾರ ತನಿಖೆಗೆ ಕ್ರಮವಹಿಸಬೇಕು ಎಂದಿದ್ದಾರೆ.

ಪ್ರಧಾನಿ ಮತ್ತು ಬಿಜೆಪಿ ನಾಯಕರು, ಸಿನಿಮಾವನ್ನು ತೆರಿಗೆ ಮುಕ್ತ ಮಾಡಿ, ಉಚಿತ ಟಿಕೆಟ್ ನೀಡುವ ಮೂಲಕ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ಪ್ರಚಾರ ಮಾಡುತ್ತಿದ್ದಾರೆ. ಧಾರ್ಮಿಕ ಆಧಾರದ ಮೇಲೆ ಜನರನ್ನು ಪ್ರಚೋಧಿಸಿ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button