Breaking NewsLatestರಾಜ್ಯಸುದ್ದಿ
ರಾಜ್ಯಾದ್ಯಂತ ಜುಲೈ 21ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳುರು: ರಾಜ್ಯದ ಹಲವೆಡೆ ಇಂದಿನಿಂದ ಜುಲೈ.21ರವರೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಅದರಲ್ಲೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ತೀವ್ರತೆ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವಂತ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 18ರ ಇಂದಿನಿಂದ ಜುಲೈ.21ರವರೆಗೆ ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಅಲ್ಲದೇ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ ಜುಲೈ 21ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಇನ್ನೂ ಉತ್ತರ ಒಳನಾಡಿದ ಜಿಲ್ಲೆಗಳಾದಂತ ಕೊಪ್ಪಳ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮತ್ತು ದಕ್ಷಿಣ ಒಳನಾಡಿದ ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
