Breaking NewsLatestರಾಜಕೀಯರಾಷ್ಟ್ರೀಯಸುದ್ದಿ

ಪಶ್ಚಿಮ ಬಂಗಾಳ: ಬಿಜೆಪಿ ತೊರೆದು ಟಿಎಂಸಿ ಸೇರಿದ ಶಾಸಕ ತನ್ಮಯ್ ಘೋಷ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಷ್ಣುಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ತನ್ಮಯ್ ಘೋಷ್ ಬಿಜೆಪಿ ತೊರೆದು ಸೋಮವಾರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸೇಡಿನ ರಾಜಕಾರಣವಷ್ಟೇ ಬಿಜೆಪಿಗೆ ಗೊತ್ತು. ಬಂಗಾಳದ ಜನರು ಒಗ್ಗಟ್ಟಾಗಿದ್ದು, ಈ ಒಗ್ಗಟ್ಟು ಸಹಿಸದೆ, ಒಡಕು ಸೃಷ್ಟಿಸಲು ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಇಂತಹ ಜನವಿರೋಧಿ ಧೋರಣೆಗೆ ನನ್ನ ವಿರೋಧವಿದೆ. ಹೀಗಾಗಿ ಟಿಎಂಸಿ ಸೇರುತ್ತಿದ್ದೇನೆ. ರಾಜ್ಯದ ಅಭಿವೃದ್ಧಿಗಾಗಿ ಎಲ್ಲರೂ ಟಿಎಂಸಿ ಸೇರಲೇಬೇಕಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ 292 ಸ್ಥಾನಗಳ ಪೈಕಿ ಟಿಎಂಸಿ 212 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ಮಮತಾ ಸತತ 3ನೇ ಅವಧಿಗೆ ಅಧಿಕಾರ ಉಳಿಸಿಕೊಂಡಿದ್ದರು. 77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಬಿಜೆಪಿಯು ಪ್ರಮುಖ ವಿರೋಧ ಪಕ್ಷವಾಗಿ ರೂಪುಗೊಂಡಿತ್ತು.

ಮಮತಾ ಬ್ಯಾನರ್ಜಿ ಅವರು ಮತ್ತೆ ಸಿಎಂ ಆದ ನಂತರ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಮತ್ತು ಅವರ ಪುತ್ರ ಸುಭ್ರಾಘ್ಷು ರಾಯ್ ಅವರು ಎರಡು ತಿಂಗಳ ಹಿಂದೆ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) ಸೇರ್ಪಡೆಯಾಗಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button