Breaking NewsLatestಜಿಲ್ಲಾ ಸುದ್ದಿದಾವಣಗೆರೆರಾಜ್ಯಸುದ್ದಿ

150 ಸ್ಥಾನ ಗೆಲ್ಲಲು ಪ್ರವಾಸ ಆರಂಭಿಸಿದ್ದೇವೆ: ಯಡಿಯೂರಪ್ಪ ವಿಶ್ವಾಸದ ನುಡಿ

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ಸಲುವಾಗಿ ಚುನಾವಣಾ ಪ್ರಚಾರ ಆರಂಭಿಸಿದ್ದೇವೆ. ವಿಜಯನಗರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಎರಡು ದಿನ ಸುಧೀರ್ಘ ಸಭೆ ಮಾಡಿದ್ದಾರೆ. ಮುಂದೆಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ‌ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಜಿಎಂಐಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ, ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸಬೇಕಿದೆ. ಒಂದು ವರ್ಷಕ್ಕಿಂತ ಮುಂಚೆ ಚುನಾವಣೆ ತಯಾರಿ ಆರಂಭಿಸಿದ್ದು, 150 ಸೀಟು ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.

ಎರಡು ದಿನದ ಸಭೆ ನಂತರ ಮತ್ತೊಮ್ಮೆ ರಾಜ್ಯ ಪ್ರವಾಸ ಎಲ್ಲಾ ಕಡೆ ಆರಂಭವಾಗುತ್ತೆ. ಇಡೀ ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಜನ‌ ಕಾಂಗ್ರೆಸ್ ಅನ್ನು ತಿರಸ್ಕಾರ ಮಾಡಿದ್ದಾರೆ. ಕಾಂಗ್ರೆಸ್ ಮುಕ್ತ ದೇಶವಾಗಿದೆ. ಆದ್ರೆ ಕರ್ನಾಟಕದಲ್ಲಿ ಸ್ವಲ್ಪ ಉಸಿರಾಡುತ್ತಿದೆ. ಇದೊಂದು ಬಾರಿ ಗೆದ್ದರೆ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚುತ್ತದೆ ಎಂದು ಭವಿಷ್ಯ ನುಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button