Breaking NewsLatestಉಡುಪಿಕಲಬುರ್ಗಿಕೊಡಗುಜಿಲ್ಲಾ ಸುದ್ದಿ

ಬೆಂಗಳೂರು, ಶಿವಮೊಗ್ಗ ಸೇರಿ 20 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕದ ಬೆಂಗಳೂರು, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಅ.

12ರವರೆಗೂ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ 20 ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ 3 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಇನ್ನೂ 3 ದಿನ ಗುಡುಗು ಸಹಿತ

ಯಾಗುವ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ, ಗದಗ, ಯಾದಗಿರಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ತುಮಕೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಅ. 11ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button