IPL 2022ಕ್ರಿಕೆಟ್

ಸಿಎಸ್ ಕೆ ಸೋಲಿಗೆ ಕಾರಣವಾಯ್ತು ಕೊನೆ ಓವರ್!

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸ್ಮನ್ ರಾಬಿನ್ ಉತ್ತಪ್ಪ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.


ಗುರುವಾರ ರಾತ್ರಿ ನಡೆದ ಪಂದ್ಯದಲ್ಲಿ 211 ರನ್ ಬೃಹತ್ ಮೊತ್ತದ ಗುರಿಯನ್ನು ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ನೀಡಿದ್ದರ ಹೊರತಾಗಿಯೂ 19ನೇ ಓವರ್ನಲ್ಲಿ 25 ರನ್ ನೀಡುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಇನ್ನೂ ಮೂರು ಎಸೆತಗಳು ಬಾಕಿ ಇರುವಾಗಲೇ ಸೋಲು ಅನುಭವಿಸಿತು. ಆ ಮೂಲಕ 2022ರ ಟೂರ್ನಿಯಲ್ಲಿ ಮೊದಲ ಗೆಲುವಿನ ವಿಶ್ವಾಸದಲ್ಲಿದ್ದ ಸಿಎಸ್ಕೆಗೆ ಭಾರಿ ನಿರಾಸೆಯಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button