
ನಾಟಿಂಗ್ ಹ್ಯಾಮ್: ಭಾರತದ ವೇಗದ ಬೌಲರ್ ಗಳ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಕೇವಲ183 ರನ್ ಗೆ ಸರ್ವಪತನ ಕಂಡಿತು.
ಜಸ್ಪ್ರೀತ್ ಬುಮ್ರಾ (46ಕ್ಕೆ 4), ಮೊಹಮ್ಮದ್ ಶಮಿ (26ಕ್ಕೆ 3) ಮತ್ತು ಶಾರ್ದೂಲ ಠಾಕೂರ್ (48ಕ್ಕೆ 1) ಇಂಗ್ಲೆಂಡನ್ನು ಅಲ್ಪ ಮೊತ್ತಕ್ಕೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.
ಭಾರತ ತನ್ನ ಮೊದಲ ಇನಿಂಗ್ಸ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದೆ. ಕ.ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದಾರೆ.
ಐಸಿಸಿ ಟೆಸ್ಟ್ ಚಾಂಪಿಯನ್ಷಿಪ್ ನ ಎರಡನೇ ವರ್ಷದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿತ್ತು. ಇಂಗ್ಲೆಂಡ್ ಪರ ಜೊಯ್ ರೂಟ್ 64 ರನ್ ಗಳಿಸಿದ್ದನ್ನು ಹೊರತುಪಡಿಸಿದರೆ ಇತರ ಆಟಗಾರರು ಭಾರತದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲರಾದರು. 45 ರನ್ ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತನ್ನ ಕೊನೆಯ 7 ವಿಕೆಟ್ ಕಳೆದುಕೊಂಡಿತು.




