ಜಿಲ್ಲಾ ಸುದ್ದಿಮೈಸೂರು
ಆಟೋ ಚಾಲಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ದುಷ್ಕರ್ಮಿಗಳು ಚಾಕು ಇರಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಜಯಲಕ್ಷ್ಮಿಪುರಂನಲ್ಲಿ ಈ ಘಟನೆ ನಡೆದಿದ್ದು, ತೌಸಿಫ್‌ಬಿನ್ ಫೀರ್ ಪಾಷ (35) ಗಾಯಗೊಂಡ ಆಟೋ ಚಾಲಕ. ಮೈಸೂರಿನ ಹಲೀಂ ನಗರದ ನಿವಾಸಿಯಾಗಿರುವ ತೌಸಿಫ್‌ಬಿನ್ ಫೀರ್ ಪಾಷಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ.
ಗಾಯಗೊಂಡ ತೌಸಿಫ್ ರನ್ನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಭಂದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




