ಉತ್ತರ ಕನ್ನಡಜಿಲ್ಲಾ ಸುದ್ದಿ

ಭಟ್ಕಳದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಕಾನ್‍ಮದ್ಲುವಿನಲ್ಲಿ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವತಿಯನ್ನು ಬೆಳಕೆ ಕಾನ್‍ಮದ್ಲುವಿನ ಬೊಮ್ಮನಕೇರಿ ನಿವಾಸಿ ಕವನಾ ಎಂ.ನಾಯ್ಕ (17) ಎಂದು ಗುರುತಿಸಲಾಗಿದೆ.

ಈಕೆಯು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ಯಲ್ಲಿ ಓದುತ್ತಿದ್ದಳೆನ್ನಲಾಗಿದೆ. ಶುಕ್ರವಾರ ಕಾಲೇಜಿನಿಂದ ಮನೆಗೆ ಬಂದವಳು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತನ್ನ ಕೋಣೆಗೆ ತೆರಳಿ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button